ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಪ್ರತ್ಯೇಕ ಕಾಲೇಜು ಸ್ಥಾಫನೆಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ. ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕ ಎಂದು ಹೇಳಿದ್ದಾರೆ.
ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಆರಂಭವಾಗುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈ ಸಂಬಂಧ ಹಿಂದೂ ಸಂಘಟನೆಗಳು ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದವು. ಸರ್ಕಾರದ ನಿರ್ಧಾರಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿದ್ದವು.
ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈ ವಿಷಯ ಸರ್ಕಾರದ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ, ಇದು ಸರ್ಕಾರದ ನಿಲುವು ಅಲ್ಲ, ಈ ಬಗ್ಗೆ ಚರ್ಚೆ ಆಗಿಲ್ಲ. ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು ಅವರ ವೈಯಕ್ತಿಕ ಹೇಳಿಕೆಯಷ್ಟೇ, ಸರ್ಕಾರ ಏನು ನಿರ್ಧಾರ ಮಾಡುವುದಿದ್ದರೂ ಪರಾಮರ್ಶೆ ಮಾಡಿ ನಿರ್ಧರಿಸುತ್ತದೆ ಎಂಬ ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.