ಸರ್ಕಾರಿ ವೈದ್ಯರಾಗಿ ನೇಮಕವಾದ ಇಬ್ಬರು ಮಂಗಳಮುಖಿಯರು| ಖಾಸಗಿ ಆಸ್ಪತ್ರೆಯಿಂದ ವಜಾಗೊಂಡಿದ್ದವರು ಸರ್ಕಾರಿ ಸೇವೆಗೆ ಹಾಜರ್

ಸಮಗ್ರ ನ್ಯೂಸ್: ಮೊದಲ ಬಾರಿಗೆ ಮಂಗಳಮುಖಿಯರಿಬ್ಬರು ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ನೇಮಕವಾಗಿದ್ದಾರೆ. ಎಂಬಿಬಿಎಸ್ ಪದವಿ ಮುಗಿಸಿರುವ ಪ್ರಾಚಿ ರಾತೋಡ್ ಹಾಗೂ ರುತ್ ಜಾನ್ ಪೌಲ್ ಅವರೇ ಈ ಸಾಧನೆ ಮಾಡಿದವರು. ಈ ಮೂಲಕ ಈ ಇಬ್ಬರು ಮಂಗಳಮುಖಿ ವೈದ್ಯರು ತೆಲಂಗಾಣದಲ್ಲಿ ಇತಿಹಾಸ ಬರೆದಂತಾಗಿದೆ.

Ad Widget ... ..

೨೦೧೫ ರಲ್ಲಿ ಈ ಲೈಂಗಿಕ ಅಲ್ಪಸಂಖ್ಯಾತರು ಎಂಬಿಬಿಎಸ್ ಪದವಿ ಮುಗಿಸಿದ್ದರು. ನಂತರ ಕೆಲ ವರ್ಷ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಾಚಿ ರಾತೋಡ್ ಅವರ ಲಿಂಗ ವಿಚಾರವಾಗಿ ಅವರು ಸೇವೆ ಸಲ್ಲಿಸುತ್ತಿದ್ದ ಒಂದು ದೊಡ್ಡ ಖಾಸಗಿ ಆಸ್ಪತ್ರೆಯಿಂದ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು.

Ad Widget

Leave a Comment

Your email address will not be published. Required fields are marked *