Ad Widget .

ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆ

ಸಮಗ್ರ ನ್ಯೂಸ್: ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆಗೈದಿರುವ ಕೃತ್ಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.

Ad Widget . Ad Widget .

ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ.
ನಗರದ ವಿನಾಯಕ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Ad Widget . Ad Widget .

ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ ಕೊಟ್ಟಿದ್ದರು. ಮನೆಯಲ್ಲಿ ವೃದ್ಧ ದಂಪತಿ ಮಾತ್ರವೇ ವಾಸವಾಗಿದ್ದರು. ಹೊಸದುರ್ಗದಲ್ಲಿ ಅಡುಗೆ ಎಣ್ಣೆ ವ್ಯಾಪಾರ ಮಾಡುತ್ತಿದ್ದ ಪ್ರಭಾಕರ್ ಶೆಟ್ರು ಮೇಲಿನ ವೈಯುಕ್ತಿಕ ದ್ವೇಷದಿಂದ ಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *