ಮುರುಘಾ ಶರಣರಿಗೆ ಜೈಲೇ ಗತಿ| ತಿರಸ್ಕೃತವಾಯ್ತು ಮತ್ತೊಂದು ಜಾಮೀನು ಅರ್ಜಿ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೆ ಜೈಲೇ ಗತಿಯಾಗಿದೆ. 2ನೇ ಪೋಕ್ಸೋ ಪ್ರಕರಣದಲ್ಲಿಯೂ ಮುರುಘಾ ಶರಣರಿಗೆ ಜಾಮೀನು ನಿರಾಕರಿಸಲಾಗಿದೆ.

Ad Widget ... ..

ಈಗಾಗಲೇ ಮೊದಲ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿಯೂ ಮುರುಘಾಶ್ರೀಗಳಿಗೆ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ.

Ad Widget

ಅ.13ರಂದು ದಾಖಲಾಗಿದ್ದ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳು ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.

Leave a Comment

Your email address will not be published. Required fields are marked *