ಚಿರತೆ ದಾಳಿಯಿಂದ ಮೃತಪಟ್ಟವರಿಗೆ 5ಲಕ್ಷ ಪರಿಹಾರ; ಚಿರತೆ ಹಿಡಿಯಲು ವಿಶೇಷ ತಂಡ- ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

Ad Widget ... ..

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕಂಡುಬಂದಿರುವ ಚಿರತೆಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

Ad Widget

ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಂತೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ನೀಡಲಾಗುವುದು. ಕಾಡಿನಲ್ಲಿದ್ದ ಚಿರತೆಗಳು ಈಗ ನಾಡಿನತ್ತ ಬರುತ್ತಿದ್ದು ಬೆಂಗಳೂರಿನ ಸುತ್ತಮುತ್ತ ಓಡಾಡುತ್ತಿರುವುದು ಜನತೆಯನ್ನು ಭಯಭೀತಗೊಳಿಸಿದೆ. ಚಿರತೆಯನ್ನು ಜೀವಂತವಾಗಿ ಸೆರೆಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದರು

Leave a Comment

Your email address will not be published. Required fields are marked *