ಸಮಗ್ರ ನ್ಯೂಸ್: ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ವಿಕಾಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಭು ಚೌಹ್ಹಾಣ್ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಬಂದ ಮೇಲೆ ಗೋವುಗಳ ಹತ್ಯೆ ಸಂಖ್ಯೆ ಇಳಿಕೆಯಾಗುತ್ತಿದೆ, ಕಾನೂನು ಉಲ್ಲಂಘಿಸಿ ಗೋಹತ್ಯೆ ಎಸಗುವ ಆರೋಪಿಗಳಿಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ರಾಜ್ಯದಲ್ಲಿ 1964ರಿಂದಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿತ್ತು, ಆಗ ಗೋಹತ್ಯೆಗೆ 1 ಸಾವಿರ ದಂಡ, 6 ತಿಂಗಳು ಜೈಲು ಶಿಕ್ಷೆ ಇತ್ತು. ಈಗ ಕಾಯ್ದೆ ತಿದ್ದುಪಡಿ ಮಾಡಿದ್ದೇವೆ, ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ