ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯಲ್ಲಿ ಹುಲಿ, ಚಿರತೆಗಳ ಆರ್ಭಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹೊಲದಲ್ಲಿ ಹಸು ಕಟ್ಟಿರುವ ವೇಳೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ವಾರದಿಂದ ಹುಲಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದರು ಹುಲಿ ಸಿಗದೆ ಜನರಲ್ಲಿ ಆತಂಕ ಮೂಡಿಸಿದೆ ಹೈರಿಗೆ ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿರುವ ಹುಲಿ ಸುತ್ತ ಮುತ್ತಲಿನ ಗ್ರಾಮದ ಜನರಲ್ಲಿ ಬಯ ಹುಟ್ಟಿಸಿದೆ. ರೈತರು ತಮ್ಮ ಜಮೀನುಗಳಿಗೆ ಹೋಗಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ.
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚಿಕ್ಕಹನಸೋಗೆ ಗ್ರಾಮದ ಹರೀಶ್ ಎಂಬುವರ ತೋಟದಲ್ಲಿ ಶನಿವಾರ ಚಿರತೆ ಕಾಣಿಸಿಕೊಂಡಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ಕಾಣಿಸಿತು. ಇದರಿಂದ ಗಾಬರಿಗೊಂಡು ಓಡಿದ ಹರೀಶ್, ಗ್ರಾಮದ ಜನರಿಗೆ ವಿಷಯ ತಿಳಿಸಿದರು. ಗ್ರಾಮಸ್ಥರು ಶಾಸಕ ಸಾ.ರಾ.ಮಹೇಶ್ ಅವರಿಗೆ ವಿಷಯ ತಿಳಿಸಿದರು. ಶಾಸಕರು ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೋಡಿ, ಚಿರತೆ ಸೆರೆ ಹಿಡಿಯಲು ಸೂಚಿಸಿದರು. ಶಾಸಕರ ಸೂಚನೆ ಮೇರೆಗೆ ಅಧಿಕಾರಿಗಳು ಬೋನು ಇಟ್ಟು ಕಾದು ಕುಳಿತಿದ್ದಾರೆ. ಚಿರತೆ ರಾತ್ರಿ ವೇಳೆ ರೈತರ ಭತ್ತ, ಗದ್ದೆ, ತೋಟಗಳಲ್ಲಿ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದೆ.