Ad Widget .

ದಕ್ಷಿಣ ಕನ್ನಡ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ
ಮೆದುಳು ಜ್ವರಕ್ಕೆ ಲಸಿಕೆ ಅಭಿಯಾನ

ಸಮಗ್ರ ನ್ಯೂಸ್ : ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

Ad Widget . Ad Widget .

ಜೆಇ ಲಸಿಕಾ ಅಭಿಯಾನ ಕುರಿತುಮಾಹಿತಿ ನೀಡಿದ ಅವರು, ‘ಜೆಇ ಮೆದುಳು ಜ್ವರ ಫ್ಲೇವಿ ವೈರಸ್‌ನಿಂದ ಬರುತ್ತದೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟುಮಾಡುವ ಸಾಧ್ಯತೆಗಳಿವೆ. ಈಗಾಗಲೇ ರಾಜ್ಯದಲ್ಲಿ ಜೆಇ ಎಂಡೆಮಿಕ್‌ ಪೀಡಿತ ಎಂದು ಗುರುತಿಸಿರುವ 10 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ. ಸದ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

Ad Widget . Ad Widget .

ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್‌ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದ್ದು, ಡಿಸೆಂಬರ್‌ ಮೊದಲನೇ ವಾರದಲ್ಲಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕೆ ನೀಡಲಾಗುವುದು ಎಂದರು.

Leave a Comment

Your email address will not be published. Required fields are marked *