ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ ಬಂದ ಆಕ್ಷೇಪಗಳ ನಂತರ ಈಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು, ಅದರಲ್ಲಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ ತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ವಿಷಯವಾರು ಅಂತಿಮ ವೇಳಾಪಟ್ಟಿ ಹೀಗಿದೆ:
ಮಾ.31, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
ಎ. 04, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ
ಎ.06, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
ಎ.08- ಶನಿವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಎ.10, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ಎ.12- ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ಎ.15 ಶನಿವಾರ – ಸಮಾಜ ವಿಜ್ಞಾನ.