ಸಮಗ್ರ ನ್ಯೂಸ್: ವಿದ್ಯುತ್ ಚಾಲಿತ ರೈಲುಗಳು ಸಂಚರಿಸುವ ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನಿಗೆ ವಿದ್ಯುತ್ ತಗುಲಿ ಮರ್ಮಾಂಗಕ್ಕೆ ತೀವ್ರತರ ಗಾಯವಾದ ಘಟನೆ ಶಿರಡಿನಗರದ ರೈಲು ಹಳಿಯಲ್ಲಿ ನಡೆದಿದೆ.
ನಗರದ ವಿನಾಯಕ ಎಂಬಾತನೇ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಸದ್ಯ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್ಗೆ ದಾಖಲಿಸಲಾಗಿದೆ. ಈತ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ಸೇಲ್ಫಿ ಗೀಳುಗೆ ಬಿದ್ದಿದ್ದ ವಿದ್ಯಾರ್ಥಿ ಅಪಾಯಕಾರಿ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದ. ಅಲ್ಲಿ ಬರುವ ರಿಯಾಕ್ಷನ್ಗಳಿಗೆ ಪ್ರಚೋದನೆಗೊಂಡು ಅಪಾಯಕಾರಿ ಸ್ಥಳಗಳನ್ನು ಆಯ್ದುಕೊಳ್ಳುತ್ತಿದ್ದ. ವಿದ್ಯಾರ್ಥಿ ಕಣ್ಣಿಗೆ ಬಿದ್ದಿದ್ದ ಶಿರಡಿನಗರದ ರೈಲು ಹಳಿ. ಹೇಳಿಕೇಳಿ ಇದು ಅಪಾಯಕಾರಿ ಸ್ಥಳ. ಹೈಟೆನ್ಷನ್ ವಿದ್ಯುತ್ ಹರಿಯುತ್ತದೆ ಎಂಥ ಸ್ಥಳದಲ್ಲಿ ಸೆಲ್ಫಿ ತೆಗೆಯಲು ಹೋಗಿದ್ದ ವಿದ್ಯಾರ್ಥಿ ವಿನಾಯಕ. ಸೆಲ್ಫಿ ತೆಗೆಯುವ ವೇಳೆ ವಿದ್ಯುತ್ ತಗುಲಿದೆ. ವಿದ್ಯುತ್ ಸ್ಪರ್ಶದಿಂದ ಮರ್ಮಾಂಗ ಸುಟ್ಟುಹೋಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸಿ ಮತ್ತೆಂದೂ ಇಂಥ ಹುಚ್ಚಾಟಗಳು ನಡೆಯದಂತೆ ಕಠಿಣ ಕ್ರಮ ಜರುಗಿಸಬಹುದು.