ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ

ಸಮಗ್ರ ನ್ಯೂಸ್: ಲಾಡ್ಜ್​ನಲ್ಲಿ ಯುವಕ ಹಾಗೂ ಯುವತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ.

Ad Widget ... ..

ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್​ಗೆ ತೆರಳಿದ್ದರು.‌ ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget

ಯುವಕ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದವನು ಎನ್ನಲಾಗಿದೆ. ಇಬ್ಬರ ನಡುವಿನ ಪ್ರೀತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವುದೇ ಆತ್ಮಹತ್ಯೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸ್​ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *