Ad Widget .

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್

ಸಮಗ್ರ ನ್ಯೂಸ್: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ ಆಂತರಿಕ ತನಿಖೆಗೆ ಆದೇಶಿಸಿದೆ.

Ad Widget . Ad Widget .

ಬುರ್ಖಾ ಧರಿಸಿ ವಿಧ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ ಬುರ್ಖಾ ಧರಿಸಿ ನೃತ್ಯ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

Ad Widget . Ad Widget .

ಅಲ್ಲದೆ ನೃತ್ಯ ಪ್ರದರ್ಶಿಸಿದ ವಿಧ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದೆ. ಕಾರ್ಯಕ್ರಮದ ಪ್ರಾರಂಭದಲ್ಲಿ ವಿಧ್ಯಾರ್ಥಿಗಳು ಅನುಮತಿ ಇಲ್ಲದೆ ಈ ನೃತ್ಯ ಪ್ರದರ್ಶಿಸಿದ್ದಾರೆ ಎಂದು ಕಾಲೇಜು ಮಂಡಳಿ ಹೇಳಿದೆ. ಶಾಲೆ ಕೋಮು ಸೌಹಾರ್ಧತೆ ಕದಡುವ ಯಾವುದೇ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.

Leave a Comment

Your email address will not be published. Required fields are marked *