ರಾಜ್ಯದಲ್ಲಿ ಇನ್ನೂ ಐದು ದಿನ ಚಳಿ, ಮಳೆ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ರಾಜ್ಯಾದ್ಯಂತ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

. Ad Widget . Ad Widget

ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ. ಡಿ.13ರವರೆಗೂ ಮಳೆಯಾಗಲಿದ್ದು, ಈ ನಿಟ್ಟಿನಲ್ಲಿ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ

. Ad Widget . . Ad Widget . Ad Widget

ಕರ್ನಾಟಕದ ಮೇಲೆ ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇಲೆ ‘ಮಾಂಡೌಸ್’ ಪ್ರಭಾವ ಹೆಚ್ಚಾಗಿರಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿದಂ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉಳಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದ್ದು, 3 ದಿನಗಳ ಪೈಕಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಸಹಿತ ಧಾರಾಕಾರವಾಗಿ ಮಳೆಯಾಗುವ ಎಲ್ಲಾ ಸಾಧ್ಯತೆಗಳಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

Leave a Comment

Your email address will not be published. Required fields are marked *