Ad Widget .

ಕಾರ್ಕಳ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ

ಸಮಗ್ರ ನ್ಯೂಸ್: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ( ಡಿ.10 ರಂದು) ನಡೆದಿದೆ.

Ad Widget . Ad Widget .

ಮೃತಪಟ್ಟವರನ್ನು ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 7 ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

ಮೃತರನ್ನು ಬೆಂಗಳೂರು ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಎಂದು ಗುರುತಿಸಲಾಗಿದೆ. ದಂಪತಿಯ ಎರಡು 2 ವರ್ಷದ ಮಗು ಕೂಡ ಅಪಘಾತಕ್ಕೆ ಬಲಿಯಾಗಿದೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಆಂಧ್ರದ ಕುಟುಂಬ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿಂದ ಶೃಂಗೇರಿ ಹೋಗುತ್ತಿದ್ದ ಸಂದರ್ಭ ನೆಲ್ಲಿಕಾರು ಸಮೀಪ ಈ ಘಟನೆ ಸಂಭವಿಸಿದೆ. ಕಾರ್ಕಳದಿಂದ ಬೆಳ್ತಂಗಡಿಗೆ ಹೋಗುತ್ತಿದ್ದ ಎಚ್‌ ಟಿ ಕಂಪನಿ ಲಿಮಿಟೆಡ್‌ ಸಂಸ್ತೆಗೆ ಸೇರಿದ ಬಸ್ ಹುಂಡೈ ಕಾರಿಗೆ ಡಿಕ್ಕಿಹೊಡೆದಿದೆ.

Leave a Comment

Your email address will not be published. Required fields are marked *