Ad Widget .

ಬಂಟ್ವಾಳ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ಸಸ್ಪೆಂಡ್

ಸಮಗ್ರ ನ್ಯೂಸ್: ವಕೀಲ ಕುಲದೀಪ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸುತೇಶ್ ರನ್ನು ಅಮಾನತುಗೊಳಿಸಿ ಇನ್‌ಸ್ಪೆಕ್ಟರ್ ಜನರಲ್ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅವರನ್ನು ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಪ್ರತಿಭಟನೆ ನಡೆಸಿ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರೊಟ್ ಅವರಿಗೆ ಮನವಿ ನೀಡಿದ್ದರು.

Ad Widget . Ad Widget .

ಮನವಿ ಕುರಿತಂತೆ ಪರಿಶೀಲನೆ ನಡೆಸಿರುವ ಪೊಲೀಸ್ ಇಲಾಖೆ ಇದೀಗ ಸುತೇಶ್ ರನ್ನು ಅಮಾನತು ಮಾಡಿದ್ದು, ದಕ್ಷಿಣಕನ್ನಡ ಜಿಲ್ಲಾ ಕಾನೂನು ವೇದಿಕೆ (ರಿ) ಮಂಗಳೂರು ಇದರ ಹೋರಾಟಕ್ಕೆ ಇದೀಗ ಜಯ ಸಂದಿದೆ.

Leave a Comment

Your email address will not be published. Required fields are marked *