ಹವಾಮಾನ ವರದಿ; ಡಿ. 12ರವರೆಗೂ ಮುಂದುವರಿಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಉಂಟಾಗಿರುವ ಮ್ಯಾಂಡೌಸ್‌ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ.

Ad Widget ... ..

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ಹೇಳಿದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿತ್ರದುರ್ಗ, ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಜೆಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದೆ.

Leave a Comment

Your email address will not be published. Required fields are marked *