ನಿರಂತರ ಮಳೆ ಹಿನ್ನಲೆ; ಇಂದು(ಡಿ.12) ಈ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮಾಂಡೌಸ್ ಚಂಡಮಾರುತ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ವಿಪರೀತ ಚಳಿಯ ಹಿನ್ನೆಲೆಯಲ್ಲಿ ಸೋಮವಾರ(ಡಿ.12) ಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

Ad Widget ... ..

ಮಾಂಡೌಸ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತಟ್ಟಿದೆ. ನಾಳೆಯೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರವೇ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *