ಸಮಗ್ರ ನ್ಯೂಸ್: ಚುನಾವಣೆ ಹಿನ್ನಲೆ ಮೈಸೂರು ಖಾಕಿ ಪಡೆ ಅಲರ್ಟ್ ಆಗುತ್ತಿದ್ದು, ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಮುಂದಾಗಿದೆ. ಶಾಂತಿ ಕದಡುವ ಯತ್ನ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಳ್ಳಂಬೆಳಗ್ಗೆ ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್ ಮಾಡಿಸಿದ್ದು ಸುಮಾರು 50 ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನ ಹೆಬ್ಬಾಳ್ ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಸಮಯದಲ್ಲಿ ಅಹಿತಕರ ಘಟನೆಗೆ ಆಸ್ಪದ ನೀಡಿದ್ರೆ ಹುಷಾರ್ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಇದೇ ವೇಳೆ ನಗರದ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮಾರಕಾಸ್ತ್ರಗಳಮ್ನ ಸಂಗ್ರಹಿಸದಂತೆ ಎಚ್ಚರಿಕೆ ನೀಡಿದ್ದಾರೆ. ಸನ್ನಡತೆಯಿಂದ ನಡೆದುಕೊಳ್ಳುವಂತೆ ಹಲವು ರೌಡಿಗಳಿಂದ ಬಾಂಡ್ ಬರೆಸಿಕೊಂಡಿದ್ದಾರೆ. ಹಾಗಂದು ವೇಳೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಕಾನೂನು ಮತ್ರು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಘುಂಟಿ,
ಎಸಿಪಿಗಳಾದ ಶಿವಕುಮಾರ್ ಅಶ್ವತ್ಥ್ ನಾರಾಯಣ್ ಶಶಿಧರ್ ಗಂಗಾಧರ ಸ್ವಾಮಿ ನೇತೃತ್ವದಲ್ಲಿ ರೌಡಿಗಳ ಪೆರೇಡ್ ನಡೆದಿದೆ ಮೈಸೂರು ನಗರ ಎಲ್ಲಾ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳು ಈ ವೇಳೆ ಹಾಜರಿದ್ದರು.