ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

. Ad Widget . Ad Widget

ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ.

. Ad Widget . . Ad Widget . Ad Widget

ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ನಾನು ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ಒತ್ತಾಯವಾಗಿದೆ ಎಂದರು.

Leave a Comment

Your email address will not be published. Required fields are marked *