ಸಮಗ್ರ ನ್ಯೂಸ್: ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಪಾಲಡ್ಕ ಬಳಿ ಸಂಭವಿಸಿದೆ.

ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ,ಕಾರು,ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಈ ವೆಳೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.