Ad Widget .

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆ| ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget . Ad Widget .

ಡಿಸೆಂಬರ್ 14ರಿಂದ 17ರವರೆಗೆ ಕಡಲು ಪ್ರಕ್ಷುಬ್ದವಾಗಲಿದ್ದು ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚರಲಿದೆ ಆದುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯದೇ ಇರುವುದು ಉತ್ತಮ ಅದರಲ್ಲೂ ಡಿಸೆಂಬರ್ 16ರಂದು ಗಾಳಿಯ ವೇಗ ಅತಿ ಹೆಚ್ಚು ಇರುವ ಸಾಧ್ಯತೆ ಇದೆ.

Ad Widget . Ad Widget .

ಈ ವೇಳೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಯಾವುದೇ ದೋಣಿ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿಯಲ್ಲಿರುವ ಎಲ್ಲಾ ದೋಣಿಗಳು ಕೂಡಲೇ ಧಡ ಸೇರುವಂತೆ ಮೀನುಗಾರಿಕೆ ಜಂಟ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *