Ad Widget .

ಮಂಗಳೂರು: ಶಂಕಿತ ಉಗ್ರ ಶಾರೀಕ್‌ ಬೆಂಗಳೂರಿಗೆ ಶಿಫ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

Ad Widget . Ad Widget .

ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ.

Ad Widget . Ad Widget .

ಡಿ.17 ರ ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಇನ್ನು ಅಲ್ಲಿಂದಲೇ ಎನ್‌ಐಎ ತನಿಖೆ ಚುರುಕುಗೊಳಿಸಲಿದ್ದು, ಸ್ಪೋಟದ ಹಿಂದಿನ ಆತನ ಉದ್ದೇಶ, ಹಿಂದಿರುವ ಶಕ್ತಿಗಳನ್ನು ಹೊರಗೆಡವಲಿದೆ.

Leave a Comment

Your email address will not be published. Required fields are marked *