Ad Widget .

ದಸರಾ ಗಜಪಡೆಯ ಬಲರಾಮನಿಗೆ ಗುಂಡೇಟು| ಜಮೀನು ಮಾಲೀಕನ ಬಂಧನ

ಸಮಗ್ರ ನ್ಯೂಸ್: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆಗೆ ಗುಂಡು ಹಾರಿಸಿದ ಜಮೀನಿನ ಮಾಲೀಕನನ್ನು ಬಂಧಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

Ad Widget . Ad Widget .

ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದು, ಇದರಿಂದ ಸಿಟ್ಟಿಗೆದ್ದ ಜಮೀನು ಮಾಲೀಕ ಸುರೇಶ್ ಆನೆಗೆ ಗುಂಡು ಹಾರಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶು ವೈದ್ಯಾಧಿಕಾರಿ ಡಾ. ರಮೇಶ್ ಚಿಕಿತ್ಸೆ ನೀಡಿದ್ದು, ಸದ್ಯ ಆನೆ ಬಲರಾಮ ಚೇತರಿಸಿಕೊಳ್ಳುತ್ತಿದೆ.

Ad Widget . Ad Widget .

ಆನೆ ಬಲರಾಮನಿಗೆ ಗುಂಡು ಹಾರಿಸಿ ಕೃತ್ಯ ಎಸಗಿದ್ದ ಆರೋಪದ ಮೇರೆಗೆ ಆರೋಪಿ ಸುರೇಶ್‌ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಒಂಟಿ ನಳಿಕೆಯ ಕೋವಿ ಹಾಗೂ ಕಾಡತೂಸುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಅರಣ್ಯ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Leave a Comment

Your email address will not be published. Required fields are marked *