Ad Widget .

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ.

Ad Widget . Ad Widget .

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.

Ad Widget . Ad Widget .

ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು.

Leave a Comment

Your email address will not be published. Required fields are marked *