ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ
ಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ.

Ad Widget ... ..

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನ ನೀಡಲಾಗುತ್ತಿತ್ತು.

Ad Widget

ಪ್ರಸ್ತುತ ಗೌರವ ಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳಿಗೆ ರೂ.6,000, ಉಪಾಧ್ಯಕ್ಷರುಗಳಿಗೆ ರೂ.4,000 ಹಾಗೂ ಸದಸ್ಯರುಗಳಿಗೆ ರೂ.2,000 ಮಾಸಿಕ ಗೌರವಧವನ್ನು ಪರಿಷ್ಕರಿಸಿ ನಿಗದಿಗೊಳಿಸಿ ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *