Ad Widget .

ಜ.1ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್- ಡಿಕೆಶಿ

ಸಮಗ್ರ ನ್ಯೂಸ್: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

Ad Widget . Ad Widget .

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು.

Ad Widget . Ad Widget .

ಪ್ರತಿ ಕ್ಷೇತ್ರಗಳಲ್ಲಿ 1 ರಿಂದ 3 ಆಕಾಂಕ್ಷಿಗಳ ಹೆಸರನ್ನು ಪರಿಷ್ಕರಿಸಿ ಕೆಪಿಸಿಸಿಗೆ ಕಳುಹಿಸುವಂತೆ ನಾವು ಸೂಚನೆ ನೀಡಿದ್ದೇವೆ. ಒತ್ತಡ ಹೆಚ್ಚಾಗಿದ್ದ ಸಂದರ್ಭದಲ್ಲಿ ಅಂತಹ ಕ್ಷೇತ್ರಗಳ ವಿಚಾರವನ್ನು ರಾಜ್ಯಮಟ್ಟದಲ್ಲಿ ನಾವು ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ.

ಪಕ್ಷದ ಕಾರ್ಯಕರ್ತರು ನಮ್ಮ ಆಧಾರ ಸ್ಥಂಭವಾಗಿದ್ದು, ಅವರ ಅಭಿಪ್ರಾಯ ಪಡೆದುಕೊಂಡು ಡಿಸೆಂಬರ್ 31ರ ಒಳಗಾಗಿ ಈ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಬೇಕು. ಜನವರಿ 1ರ ಒಳಗಾಗಿ ಎಲ್ಲಾ ಜಿಲ್ಲೆಗಳಿಂದ ಆಯಾ ಜಿಲ್ಲೆಗಳ ಕ್ಷೇತ್ರದ ಪರಿಷ್ಕೃತ ಅರ್ಜಿಗಳ ಪಟ್ಟಿಯನ್ನು ನೀಡಬೇಕು. ನಂತರ ರಾಜ್ಯ ಮಟ್ಟದ ಚುನಾವಣಾ ಸಮಿತಿಯು ಮತ್ತೆ ಸಭೆ ಸೇರಿ ಎಲ್ಲ ಮಾನದಂಡಗಳನ್ನು ಅನುಸರಿಸಿ ಮುಂದಿನ ಪ್ರಕ್ರಿಯೆಯನ್ನು ನಡೆಸಲಿದೆ ಎಂದಿದ್ದಾರೆ.

Leave a Comment

Your email address will not be published. Required fields are marked *