ಸಮಗ್ರ ನ್ಯೂಸ್: ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರು, ಜಾಮೀನಿನ ಮೇಲೆ ಮಂಗಳವಾರ ಬೆಳಿಗ್ಗೆ ಇಲ್ಲಿನ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು.
ಸುಪ್ರೀಂ ಆದೇಶದನ್ವಯ ವಕೀಲ ಬಾಬುರಾಜ್ ಅವರು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಜ್ಞಾನ ಪ್ರಕಾಶ್ ಬಿಡುಗಡೆಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಇಬ್ಬರಿಂದ ಶ್ಯೂರಿಟಿ ಹಾಗೂ ₹ 5 ಲಕ್ಷದ ಬಾಂಡ್ ಅನ್ನು ನ್ಯಾಯಾಲಯವು ಪಡೆದಿತ್ತು. ನಂತರ ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಟ್ ಅವರಿಗೆ ಜ್ಞಾನ ಪ್ರಕಾಶ್ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು.
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರಿಗೆ ಸುಪ್ರೀಂ ಕೋರ್ಟ್ ಮಾನವೀಯತೆ ಆಧಾರದ ಮೇಲೆ ನ.26ರಂದು ಜಾಮೀನು ಮಂಜೂರು ಮಾಡಿತ್ತು.