Ad Widget .

ಬೆಳ್ತಂಗಡಿ: ಬಸ್-ಬೈಕ್ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ನಡೆದಿದೆ.

Ad Widget . Ad Widget .

ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್‌ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್‌ (25) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget .

ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ ಬಂಟ್ವಾಳದಲ್ಲಿರುವ ಮನೆ ಕಡೆ ಇಬ್ಬರೂ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ಕಾರಣವಾದ ಬಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *