Ad Widget .

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್​ ನೂತನ ಸಭಾಪತಿಯಾಗಿ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಹೊರಟ್ಟಿ ಅವರು ಮೂರನೇ ಸಲ ಸಭಾಪತಿ ಹುದ್ದೆ ಅಲಂಕರಿಸಿದರು.

Ad Widget . Ad Widget .

ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಗಾಲದ ಅಧಿವೇಶನದ ಮೂರನೇ ದಿನವಾದ ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆ ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಚುನಾವಣಾ ಪ್ರಕ್ರಿಯೆ ಕೈಗೆತ್ತಿಕೊಂಡರು. ಸಭಾಪತಿ ಸ್ಥಾನಕ್ಕೆ 4 ಪ್ರಸ್ತಾವ ಮಂಡಿಸಲಾಯಿತು.

Ad Widget . Ad Widget .

ಸರ್ಕಾರಿ ಮುಖ್ಯ ಸಚೇತಕ ಡಾ.ವೈ.ಎ ನಾರಾಯಣಸ್ವಾಮಿ, ತೇಜಸ್ವಿನಿಗೌಡ, ಶಾಂತಾರಾಮ್ ಬುಡ್ನ ಸಿದ್ದ, ಅ.ದೇವೇಗೌಡ ಅವರು ಬಸವರಾಜ ಹೊರಟ್ಟಿ ಅವರನ್ನು ಪರಿಷತ್ತಿನ ಸಭಾಪತಿಯಾಗಿ ಚುನಾಯಿಸಬೇಕೆಂದು ಸೂಚಿಸಿದರು. ಇದನ್ನು ಬಿಜೆಪಿಯ ಹಿರಿಯ ಸದಸ್ಯರಾದ ಆಯನೂರು ಮಂಜುನಾಥ್, ಆರ್.ಶಂಕರ್, ಎಸ್.ವಿ ಸಂಕನೂರು, ಪ್ರದೀಪ್ ಶೆಟ್ಟರ್ ಅನುಮೋದಿಸಿದರು.

Leave a Comment

Your email address will not be published. Required fields are marked *