ದೇಶದಲ್ಲಿ ಕೋವಿಡ್ ಹೊಸ ತಳಿಯ ನಾಲ್ಕು ಕೇಸ್ ಪತ್ತೆ| ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್ .7 ರ ಕನಿಷ್ಠ ನಾಲ್ಕು ಪ್ರಕರಣಗಳು ಭಾರತದಲ್ಲಿ ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ. ಇಲ್ಲಿಯವರೆಗೆ, ಗುಜರಾತ್ನಿಂದ ಎರಡು, ಒಡಿಶಾದಿಂದ ಎರಡು ಪ್ರಕರಣಗಳು ವರದಿಯಾಗಿವೆ, ಇದರಲ್ಲಿ ಬಿಎಫ್.7 ರೂಪಾಂತರವನ್ನು ಪತ್ತೆಹಚ್ಚಲಾಗಿದೆ.

Ad Widget ... ..

ಚೀನಾ ಸಹಿತ ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ.

Ad Widget

ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ ಗಮನದಲ್ಲಿಟ್ಟುಕೊಂಡು ಅಂತಾರರಾಷ್ಟ್ರೀಯ ಪ್ರಯಾಣಿಕರಿಗೆ ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ.

ಪ್ರಸುತ್ತ ದೇಶದಲ್ಲಿ ಒಮಿಕ್ರಾನ್ ಸಬ್‌ವೇರಿಯಂಟ್ BF.7 ನ ಮೂರು ಪ್ರಕರಣಗಳು ಪತ್ತೆಯಾಗಿದೆ. ಎಲ್ಲರಿಗೂ ಎಚ್ಚರಿಕೆ ವಹಿಸುವಂತೆ ಮತ್ತು ಕಣ್ಗಾವಲು ಬಲಪಡಿಸಲು ನಾನು ನಿರ್ದೇಶನ ನೀಡಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

Leave a Comment

Your email address will not be published. Required fields are marked *