Ad Widget .

ಬೆಳ್ತಂಗಡಿ: ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭಿ‌ನ್ನಕೋಮಿನ ಜೋಡಿಯ ರೊಮ್ಯಾನ್ಸ್| ಇಬ್ಬರನ್ನೂ ಸಸ್ಪೆಂಡ್ ಮಾಡಿದ ಕಾಲೇಜು ಆಡಳಿತ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ‌ ನಡುವೆಯೂ ಯುವ ಜೋಡಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ರೊಮ್ಯಾನ್ಸ್ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನೂ ಸಸ್ಪೆಂಡ್ ಮಾಡಲಾದ ಘಟನೆ ನಡೆದಿದೆ.

Ad Widget . Ad Widget .

ಬೆಳ್ತಂಗಡಿಯ ಕಾಲೇಜೊಂದರ ವಿದ್ಯಾರ್ಥಿಗಳಾದ ಅನ್ಯಕೋಮಿನ ಜೋಡಿ ಸಿದ್ದರಾಮಯ್ಯ ಅತಿಥಿಯಾಗಿದ್ದ ಕಾರ್ಯಕ್ರಮದಲ್ಲೇ ರೋಮ್ಯಾನ್ಸ್​ನಲ್ಲಿ ಮುಳುಗಿದ್ದರು ಎನ್ನಲಾಗಿತ್ತು.

Ad Widget . Ad Widget .

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾಜಿ ಶಾಸಕ ವಸಂತ್ ಬಂಗೇರ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದ ವೇಳೆ ಕಾಲೇಜು ಅವರಣದಲ್ಲಿ ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಹಗ್ ಮಾಡಿ ಕಿಸ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ‌ಯಾಗುತ್ತಿದೆ.

ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ಕಾರ್ಯಕರ್ತರು ಧಮ್ಕಿ ಹಾಕಿ ಜೀವ ಬೆದರಿಕೆ ಹಾಕಿದ್ದಾರೆ. ಲವ್ ಜಿಹಾದ್ ಮಾಡುತ್ತೀಯಾ ಅಂತಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿ, ಹಿಂದೂ ವಿದ್ಯಾರ್ಥಿನಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಆದರೆ ಮತ್ತೊಂದೆಡೆ ಹಿಂದೂ ವಿದ್ಯಾರ್ಥಿನಿ ಸಸ್ಪೆಂಡ್ ಮಾಡಿ, ಮುಸ್ಲಿಂ ವಿದ್ಯಾರ್ಥಿಯನ್ನು ಸಸ್ಪೆಂಡ್ ಮಾಡಿಲ್ಲ ಎಂಬ ಚರ್ಚೆ ನಡೆಯುತ್ತಿದೆ. ಕೋಮುದ್ವೇಷದ ಹಿನ್ನಲೆಯಲ್ಲಿ ಚರ್ಚೆ ಹುಟ್ಟಿಕೊಂಡಿದೆ. ಸದ್ಯ ಕಾಲೇಜು ಆಡಳಿತ ಮಂಡಳಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಚರ್ಚೆ ಮಾಡುತ್ತಿರುವವರ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದೆ. ಇಬ್ಬರನ್ನೂ ಸಸ್ಪೆಂಡ್ ಮಾಡಿದ್ದಾಗಿ ಆಡಳಿತ ಮಂಡಳಿ ದೂರಿನಲ್ಲಿ ಉಲ್ಲೇಖಿಸಿದೆ.

Leave a Comment

Your email address will not be published. Required fields are marked *