Ad Widget .

ಚೀನಾ ಗಡಿಯಲ್ಲಿ ಭಾರೀ ದುರಂತ| 16 ವೀರ ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಭಾರತ-ಚೀನಾ ಗಡಿಯ ಸಮೀಪ ಉತ್ತರ ಸಿಕ್ಕಿಂನಲ್ಲಿ ಭಾರಿ ದುರಂತ ನಡೆದಿದ್ದು, ಸೇನಾ ವಾಹನವೊಂದು ಕಮರಿಗೆ ಬಿದ್ದು 16 ಜನ ಯೋಧರು ಸಾವನ್ನಪ್ಪಿದ್ದಾರೆ. ಅಲ್ಲದೇ, ಇತರ ನಾಲ್ವರು ಗಾಯಗೊಂಡಿದ್ದಾರೆ.

Ad Widget . Ad Widget .

ಸೇನಾ ವಾಹನವು 20 ಜನ ಯೋಧರೊಂದಿಗೆ ಗಡಿ ಭಾಗದ ಪೋಸ್ಟ್‌ಗಳತ್ತ ಸಾಗುತ್ತಿತ್ತು. ಈ ವೇಳೆ ಸ್ಕಿಡ್​ ಆಗಿ ನೂರಾರು ಅಡಿ ಆಳದ ಕಮರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಉತ್ತರ ಬಂಗಾಳದ ಸೇನಾಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

Ad Widget . Ad Widget .

ಅಪಘಾತದ ಸ್ಥಳದಿಂದ ಎಲ್ಲ ಮೃತದೇಹಗಳನ್ನು ಹೊರತೆಗೆಯಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ನಾಲ್ವರು ಸೇನಾ ಸಿಬ್ಬಂದಿಯ ಸ್ಥಿತಿಗತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *