Ad Widget .

ಕೋವಿಡ್ ವಿರುದ್ಧ ಹೋರಾಡಲು ಸಜ್ಜಾಗಿರಿ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಕೋವಿಡ್‌ ವಿರುದ್ಧ ಹೋರಾಡಲು ಎಲ್ಲಾ ಹಂತಗಳಲ್ಲೂ ಆಡಳಿತ ಯಂತ್ರ ಸಜ್ಜಾಗಿರಿಸುವ ಜೊತೆಗೆ ಕೋವಿಡ್‌ ಪರೀಕ್ಷೆ ಹಾಗೂ ವೈರಾಣು ಸಂರಚನಾ ವಿಶ್ಲೇಷಣೆಯನ್ನು ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Ad Widget . Ad Widget .

ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಆಮ್ಲಜನಕ ಸಿಲಿಂಡರ್‌, ವೆಂಟಿಲೇಟರ್‌, ಪಿಎಸ್‌ಎ ಘಟಕಗಳು ಹಾಗೂ ಮಾನವ ಸಂಪನ್ಮೂಲ ಸೇರಿದಂತೆ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿಯೇ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗಿರುವ ಮೂಲ ಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೂ ಸಲಹೆ ನೀಡಿದ್ದಾರೆ.

Ad Widget . Ad Widget .

ಕೋವಿಡ್‌ ಸೋಂಕಿತರಿಂದ ಸಂಗ್ರಹಿಸಲಾಗುವ ಮಾದರಿಗಳನ್ನು ಪ್ರತಿದಿನವೂ ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ ಐಎನ್‌ಎಸ್‌ಎಸಿಒಜಿಯ ಪ್ರಯೋಗಾಲಯಗಳಿಗೆ ಕಳುಹಿಸಬೇಕು. ಯಾವುದಾದರೂ ಹೊಸ ಮಾದರಿ ಇದ್ದರೆ ಅದನ್ನು ಆರಂಭಿಕ ಹಂತದಲ್ಲೇ ಪತ್ತೆಮಾಡಲು ಇದರಿಂದ ಅನುಕೂಲವಾಗುತ್ತದೆ ಎಂದು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದ್ದಾರೆ.

ಮಾಸ್ಕ್‌ ಕಡ್ಡಾಯಗೊಳಿಸುವ ಕುರಿತು ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಜನದಟ್ಟಣೆ ಪ್ರದೇಶಗಳಲ್ಲಿ ಮುಖಗವಸು ಧರಿಸುವಂತೆ ನಾಗರಿಕರಿಗೆ ಸಲಹೆ ನೀಡಿರುವ ಮೋದಿ, ಮುಂಬರುವ ಹಬ್ಬಗಳು ಮತ್ತು ಹೊಸ ವರ್ಷಾಚರಣೆ ವೇಳೆ ಪ್ರತಿಯೊಬ್ಬರೂ ಕೋವಿಡ್‌ ಶಿಷ್ಟಾಚಾರ ಪಾಲಿಸುವಂತೆ ಮನವಿ ಮಾಡಿದ್ದಾರೆ. ದುರ್ಬಲ ವ್ಯಕ್ತಿಗಳು ಹಾಗೂ ವಯಸ್ಸಾದವರು ಮುನ್ನೆಚ್ಚರಿಕೆ ಡೋಸ್‌ ಪಡೆಯುವಂತೆಯೂ ಹೇಳಿದ್ದಾರೆ.

Leave a Comment

Your email address will not be published. Required fields are marked *