ಮಂಗಳೂರು: ಅಕ್ರಮ ಕಸಾಯಿಖಾನೆಗೆ ಹಿಂಜಾವೇ ದಾಳಿ

ಸಮಗ್ರ ನ್ಯೂಸ್: ಅಕ್ರಮ ಕಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಅಲಂಗಾರು ಬಳಿ ನಡೆದಿದೆ.

Ad Widget ... ..

ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆ ಮೇಲೆ ಬೆಳಿಗ್ಗೆ 4 ಗಂಟೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದು, ವಧೆ ಮಾಡಲು ತಂದಿದ್ದ 4 ಗೋವು ಮತ್ತು ಭಾರೀ ಪ್ರಮಾಣ ಮಾಂಸ, ದನದ ತಲೆ ಭಾಗಗಳು ಪತ್ತೆಯಾಗಿವೆ.

Ad Widget

ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಕೆ.ಜಿ ಗಟ್ಟಲೇ ಮಾಂಸ ಸಹಿತ ಕ್ಲಾರಿನ್ ಅಲ್ವಿನ್ ಮತ್ತು ಗಿಲ್ಬರ್ಟ್ ಮಿರಂದ ಎಂಬ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *