ಸುರತ್ಕಲ್ ಚೂರಿ ಇರಿತ ಪ್ರಕರಣ| ಗಾಯಾಳು ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಸುರತ್ಕಲ್ ಸಮೀಪದ ಕೃಷ್ಣ ಪುರ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.

Ad Widget ... ..

ಮೃತ ಯುವಕನನ್ನು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಚೂರಿ ಇರಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Ad Widget

ಕಳೆದ ಕೆಲ ತಿಂಗಳುಗಳ ಹಿಂದೆ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನೊಬ್ಬನನ್ನು ಸಂಜೆ ವೇಳೆಗೆ ಅಂಗಡಿಯೊಂದರ ಮುಂಭಾಗದಲ್ಲೇ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡವು ಹತ್ಯೆ ಮಾಡಿತ್ತು. ಇಂದು ಅದೇ ರೀತಿಯಲ್ಲಿ ಜಲೀಲ್ ಗೂ ಚೂರಿ ಇರಿತವಾಗಿದ್ದು, ಅಂಗಡಿಯೊಂದರ ಮುಂಭಾಗದಲ್ಲೇ ಕೃತ್ಯ ನಡೆದಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *