ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನಗರದಾದ್ಯಂತ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೆಕ್ಷನ್ 144 ಜಾರಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಲ್ಕು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ.
ಪೂರ್ವನಿಯೋಜಿತ ಕಾರ್ಯಕ್ರಮಗಳಿಗೆ ಇದರಿಂದ ವಿನಾಯತಿ ನೀಡಲಾಗಿದ್ದು ಎರಡು ದಿನಗಳ ಕಾಲ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಮಂಗಳೂರು ಪೋಲಿಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.
‘ಇದೀಗ ಆರೋಪಿಗಳ ಪತ್ತೆಗೆ ಎಂಟು ಅಧಿಕಾರಿಗಳಿರುವ ತಂಡ ರಚಿಸಲಾಗಿದ್ದು ಆದಷ್ಟು ಬೇಗ ನೈಜ ಆರೋಪಿಗಳನ್ನು ಬಂಧಿಸಲಾಗುವುದು. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಕೊಡಬಾರದು. ಹತ್ಯೆಗೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು’ ಎಂದು ಮಂಗಳೂರು ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.