Ad Widget .

ಮೂಡಬಿದಿರೆ ಜಾಂಬೂರಿ ಹಿನ್ನಲೆ| ದ.ಕ ಜಿಲ್ಲೆಯಲ್ಲಿ 3 ದಿನ ಬಸ್ ಸಂಚಾರದಲ್ಲಿ ವ್ಯತ್ಯಯ| ಕೆಎಸ್ಆರ್ ಟಿಸಿ ಯಿಂದ ಪ್ರಕಟಣೆ

ಸಮಗ್ರ ನ್ಯೂಸ್: ಮೂಡುಬಿದಿರೆಯಲ್ಲಿ ಜಾಂಬೂರಿ ನಡೆಯುತ್ತಿದ್ದು, ಈ ಹಿನ್ನೆಲೆ ರಾಜ್ಯ, ಹೊರ ರಾಜ್ಯಗಳಿಂದ ಸ್ಕೌಟ್ಸ್‌ ಮತ್ತು ಗೈಡ್ಸ್‌ನ 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಜಾಂಬೂರಿಗೆ ಆಗಮಿಸಿದ್ದಾರೆ. ಅಲ್ಲದೇ ಅವರ ಜೊತೆಗೆ ಪೋಷಕರು, ಶಿಕ್ಷಕರು ಸಹ ಆಗಮಿಸಿದ್ದಾರೆ.

Ad Widget . Ad Widget .

ಇವರೆಲ್ಲರೂ ಜಾಂಬೂರಿ ಮುಗಿಸಿ ತಮ್ಮ ಊರುಗಳಿಗೆ ಹಿಂದಿರುಗುವ ವೇಳೆ ಡಿಸೆಂಬರ್‌ 26ರಿಂದ 28ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಹೊರಬಿದ್ದಿದೆ.

Ad Widget . Ad Widget .

ಕಾರ್ಯಕ್ರಮ ಮುಗಿಸಿ ತಮ್ಮ ಊರುಗಳಿಗೆ ಹಿಂತಿರುಗುವಾಗ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ, ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಬಸ್‌ಗಳ ಕೊರತೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *