Ad Widget .

ಬಿಜೆಪಿಗೆ ಗುಡ್ ಬೈ ಹೇಳಿ ಹೊಸ ಪಕ್ಷ ಕಟ್ಟಿದ ಜನಾರ್ಧನ ರೆಡ್ಡಿ

ಸಮಗ್ರ ನ್ಯೂಸ್: ಬಿಜೆಪಿಯ ಬಗ್ಗೆ ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜಿ.ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರು ಇರಿಸಲಾಗಿದೆ.

Ad Widget . Ad Widget .

ಬೆಂಗಳೂರಿನ ರೆಡ್ಡಿ ಅವರ ಮನೆ ‘ಪಾರಿಜಾತ’ದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಹತ್ತಾರು ವರ್ಷಗಳಿಂದ ನನ್ನ ಆತ್ಮೀಯ ಸ್ನೇಹಿತ. ಬಳ್ಳಾರಿ ಜನರ ಸೇವೆಗೆ ನಾನು ಸದಾ ಸಿದ್ಧ ಎಂದು ಅಟಲ್ ಬಿಹಾರಿ ವಾಜಪೇಯಿ ಪ್ರತಿಮೆಯ ಮುಂದೆ ಹೇಳಿದರು.

Ad Widget . Ad Widget .

ನೂತನ ಪಕ್ಷ ಘೋಷಿಸಿದ ನಂತರ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುತ್ತೇನೆ. ರಾಜ್ಯಾದ್ಯಂತ ಹೊಸ ಪಕ್ಷವನ್ನು ಸಂಘಟನೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ನನ್ನ ಪಕ್ಷ ರಾಜ್ಯದ ಜನರ ಮನ ಗೆಲ್ಲಲಿದೆ. ಯಾವೆಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಎಂಬ ಬಗ್ಗೆ ಶೀಘ್ರದಲ್ಲೇ ಹೇಳುತ್ತೇನೆ ಎಂದು ಹೇಳಿದರು. ನಮ್ಮ ಪಕ್ಷಕ್ಕೆ ದೇವರು ಮತ್ತು ವಿವಿಧ ಮಠಗಳ ಪೂಜ್ಯರ ಆಶಿರ್ವಾದ ಇರಬೇಕು ಎಂದು ಕೋರಿದರು.

Leave a Comment

Your email address will not be published. Required fields are marked *