ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... ..

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ.

ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *