Ad Widget .

ಸುರತ್ಕಲ್ ಹತ್ಯೆ ಪ್ರಕರಣ| ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿದ ಬಾವಾ!

ಸಮಗ್ರ ನ್ಯೂಸ್: ಮಂಗಳೂರಿನ ಕೃಷ್ಣಾಪುರದಲ್ಲಿ ನಡೆದಿರುವ ಅಬ್ದುಲ್ ಜಲೀಲ್ ಹತ್ಯೆಗೆ ಸಂಬಂಧಿಸಿ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿದರು.

Ad Widget . Ad Widget .

ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಶಾಂತಿ ಹದಗೆಡುತ್ತಿದ್ದು ಅಮಾಯಕ ಯುವಕರು ಬಲಿಯಾಗುತ್ತಿರುವುದನ್ನು ಸಿಎಂ ಗಮನಕ್ಕೆ ತಂದರು. ಮುಖ್ಯಮಂತ್ರಿ ಅವರು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ಆರೋಪಿಗಳನ್ನು ತಕ್ಷಣವೇ ಬಂಧಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Ad Widget . Ad Widget .

Leave a Comment

Your email address will not be published. Required fields are marked *