ಉಪ್ಪಿನಂಗಡಿ: ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಸ್ ಡಿಕ್ಕಿ| ಕುದುರೆ ಸಾವು, ಸವಾರ ಗಂಭೀರ

ಸಮಗ್ರ ನ್ಯೂಸ್: ಕುದುರೆಯೊಂದಕ್ಕೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದ್ದು, ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಡಿ.25 ರ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರ.

. Ad Widget . Ad Widget . Ad Widget

ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಸರ್ಕಾರಿ ಬಸ್ ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉಪ್ಪಿನಂಗಡಿ ಸಮೀಪ ಪಿಲಿಗೂಡಿನ ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಅಪಘಾತದ ಬಳಿಕ ಚಿಕಿತ್ಸೆ ಫಲಿಸದೆ ಕುದುರೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

. Ad Widget .

Leave a Comment

Your email address will not be published. Required fields are marked *