Ad Widget .

ಜಲೀಲ್ ಹತ್ಯೆ ಪ್ರಕರಣ| ಮೂವರು ಆರೋಪಿಗಳ ಬಂಧನ – ಶಶಿಕುಮಾರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

Ad Widget . Ad Widget .

ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು.

ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್’ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗುವವರೆಗೂ ಆರೋಪಿಗಳ ಮಾಹಿತಿ ನೀಡುವುದಿಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ, ಹೆಚ್ಚಿನ ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕೊಲೆಗೆ ಕಾರಣ ಏನು ಎನ್ನುವುದನ್ನು ಪೂರ್ಣ ತನಿಖೆ ಬಳಿಕ ತಿಳಿಸಲಾಗುವುದು. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದು, 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಶಶಿಕುಮಾರ್ ತಿಳಿಸಿದರು.

ಜಲೀಲ್ ಕೇಸ್’ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು ಮೂವರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *