ಸಮಗ್ರ ನ್ಯೂಸ್: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಕಾಗಲವಾಡಿ ಮೋಳೆ ಗ್ರಾಮದ ಶಿವರಾಜು ಹಾಗೂ ಕುಮಾರ್ ಮೃತ ದುರ್ದೈವಿಗಳು. ಸಿದ್ದರಾಜು ಎಂಬಾತ ಬಚಾವ್ ಆದರೂ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ರೇಣುಕಾದೇವಿ ಎಂಬುವರ ಹೆಸರಿನಲ್ಲಿ ಈ ಬಿಳಿಕಲ್ಲು ಕ್ವಾರಿಯ ಪರವಾನಗಿ ಇತ್ತು. ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ ಮಾಸುವ ಮುನ್ನವೇ ಈ ದುರಂತ ನಡೆದಿರುವುದು ವಿಪರ್ಯಾಸವಾಗಿದೆ. ಗಣಿಗಾರಿಕೆ ಅಧಿಕಾರಿಗಳ ಜಾಣಮೌನದಿಂದ ದುರಂತ ಮರುಕಳಿಸಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ತೆರಳಿದ್ದಾರೆ.



























