Ad Widget .

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೇಂದ್ರ ಸಚಿವ ಸ್ಮೃತಿ ಇರಾನಿ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.

Ad Widget . Ad Widget .

ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.

Ad Widget . Ad Widget .

ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಕಿರುಷಷ್ಠಿ ಸಭಾಭವನದಲ್ಲಿ ಸಂವಾದ ನಡೆಸಿದರು. ಆ ನಂತರ ಮಧ್ಯಾಹ್ನ ಮಹಾಪೂಜೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ, ಪಿ.ಜಿ.ಎಸ್.ಎನ್. ಪ್ರಸಾದ್, ಮನೋಹರ ರೈ, ಶೋಭಾ ಗಿರಿಧರ್, ವನಜಾ ಭಟ್, ಲೋಕೇಶ್, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *