ಚಾಲಕನ ಅಜಾಗ್ರತೆಗೆ ಅಮಾಯಕ ಬಾಲಕ ಬಲಿ| ಮಂಗಳೂರು ಹೊರವಲಯದಲ್ಲಿ ದಾರುಣ ಘಟನೆ

ಸಮಗ್ರ ನ್ಯೂಸ್: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹೊರವಲಯದ ಮುಡಿಪು ಕಾಲೇಜು ಬಳಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಪಜೀರ್ ನಿವಾಸಿ ಕಾರ್ತಿಕ್ (12) ಎನ್ನಲಾಗಿದೆ.

Ad Widget ... ..

ಕಾರ್ತಿಕ್ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿ ಬಸ್ಸು ಕಾಯುತ್ತಿದ್ದ ವೇಳೆ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬಳಿಕ ಎದುರಿದ್ದ ರಿಕ್ಷಾ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಾಲಕನಿಗೆ ಗುದ್ದಿದೆ.

Ad Widget

ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *