Ad Widget .

ಹಾವೇರಿಯಲ್ಲಿ ಭೀಕರ ಅಪಘಾತ| ಕಾಸರಗೋಡು ಮೂಲದ ಇಬ್ಬರು ಸ್ಪಾಟೌಟ್

ಸಮಗ್ರ ನ್ಯೂಸ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಪತ್ನಿ ಆಯಿಷಾ (62) ಎಂದು ಗುರುತಿಸಲಾಗಿದೆ.

Ad Widget . Ad Widget .

ಅಪಘಾತದಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಕಾರಿನಲ್ಲಿ ಸಿಲುಕಿದವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Ad Widget . Ad Widget .

ಮೃತದೇಹವನ್ನು ಹಾನಗಲ್ ತಾಲೂಕು ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಹುಬ್ಬಳ್ಳಿಯಿಂದ ಹಾನಗಲ್ ಕಡೆ ಹೊರಟಿತ್ತು ಎನ್ನಲಾದ ಕಾರಿನಲ್ಲಿ ಆರು ಜನರು ಪ್ರಯಾಣ ಮಾಡುತ್ತಿದ್ದರು ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *