Ad Widget .

ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ| ಇಕ್ಬಾಲ್ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget . Ad Widget .

ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು ವ್ಯಾಪಾರಿ ಇಕ್ಬಾಲ್ ಎಂಬಾತನ ಮೇಲೆ ನಗರ ಪೊಲೀಸ್ ‌ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಯಶ್ವಿತ್ ಎಂಬಾತ ಮಾಲಾಧಾರಿಯಾಗಿದ್ದು, ಸ್ನೇಹಿತನ ಜೊತೆ ರಿಕ್ಷಾ ಟೆಂಪೋದಲ್ಲಿ ಪಾರ್ಸೆಲ್ ಸರ್ವೀಸ್ ಮಾಡುವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget . Ad Widget .

ಗೂಡಿನ ಬಳಿ ಪಾರ್ಸೆಲ್ ಒಂದನ್ನು ನೀಡಲು ತೆರಳಿದ ವೇಳೆ ಅಯ್ಯಪ್ಪ ಮಾಲಾಧಾರಿಗೆ ಆರೋಪಿ ಇಕ್ಬಾಲ್ ಇದು ನಮ್ಮ ಏರಿಯಾ, ಈ ಭಾಗಕ್ಕೆ ಹಿಂದೂಗಳು ಬರಬಾರದು ಎಂಬ ಮಾತನ್ನು ಹೇಳಿದ್ದಲ್ಲದೆ, ಅತ್ಯಂತ ಕೆಟ್ಟದಾಗಿ ಅವಾಚ್ಯ ಪದಗಳಲ್ಲಿ ನಿಂದಿಸಿದಲ್ಲದೆ, ನಾವು ಅಯ್ಯಪ್ಪ ವ್ರತಧಾರಿಗಳು ಕೆಟ್ಟ ಶಬ್ದ ಬಳಸಬೇಡಿ ಎಂದು ಬೇಡಿಕೊಂಡರು ವೃತಧಾರಿಗಳ ಬಗ್ಗೆ ‌ನಿಂದನೆಯ ಮಾತುಗಳನ್ನು ಆಡಿದ್ದಾನೆ, ಜೊತೆಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *