Ad Widget .

ಹಾರುತ್ತಿರುವ ವಿಮಾನದಲ್ಲೇ ಹೊಡೆದಾಡಿಕೊಂಡ ಪ್ರಯಾಣಿಕರು| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ. ಕೆಲವರು ಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Ad Widget . Ad Widget .

ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ಸಮಾಧಾನವಾಗಿ ಮಾತಾಡಿ ಎಂದು ಒಬ್ಬ ವ್ಯಕ್ತಿ ಹೇಳಿದರೆ, ಮತ್ತೊಬ್ಬ ವ್ಯಕ್ತಿ ನಿಮ್ಮ ಕೈ ಕೆಳಗಿಳಿಸಿ ಎಂದು ಕೂಗುತ್ತಾನೆ. ಹೀಗೆ ಮಾತಿಗೆ ಮಾತು ಸೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತದೆ.

Ad Widget . Ad Widget .

ಒಬ್ಬ ವ್ಯಕ್ತಿ ಕೋಪದಿಂದ ಮತ್ತೊಬ್ಬನ ಕಪಾಳಕ್ಕೆ ಹೊಡೆಯುತ್ತಾನೆ. ಬಳಿಕ ಅದೇ ವ್ಯಕ್ತಿ ಕನ್ನಡಕ ತೆಗೆದು ನಿರಂತರವಾಗಿ ದೃಶ್ಯದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ವ್ಯಕ್ತಿ ಕೈಗಳನ್ನು ಅಡ್ಡ ಇಟ್ಟು ಏಟಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ.

ಹಳೆಯ ಸ್ನೇಹಿತರು ವಿಮಾನದಲ್ಲಿ ಎದುರಾದಾಗ ಯಾವುದೋ ವಿಷಯದ ಕುರಿತಂತೆ ಮಾತಿನ ಚಕಮಕಿ ನಡೆದು ಸಂಘರ್ಷ ನಡೆದಿದೆ ಎಂದು ಹೇಳಲಾಗಿದೆ. ಬ್ಯಾಂಕಾಕ್‌ನಿಂದ ಕೋಲ್ಕತ್ತಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದ ಸಿಬ್ಬಂದಿ ಕೊನೆಗೂ ಇಬ್ಬರನ್ನೂ ಜಗಳ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Comment

Your email address will not be published. Required fields are marked *