ಗಣರಾಜ್ಯೋತ್ಸವ ಫರೇಡ್ ಗೆ ಪುತ್ತೂರಿನ‌ ವಜೀದಾಬಾನು ಆಯ್ಕೆ

ಸಮಗ್ರ ನ್ಯೂಸ್ : 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ.

. Ad Widget . Ad Widget . Ad Widget

ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ.

. Ad Widget .

ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ. ಈಕೆ ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ ಪುತ್ರಿ.

ಪ್ರಸ್ತುತ ಎ.ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ. ಇತ್ತೀಚೆಗೆ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರ್ಯಾಂಕ್ ಪಡೆದಿರುತ್ತಾರೆ.

Leave a Comment

Your email address will not be published. Required fields are marked *