Ad Widget .

ರಾಜ್ಯಕ್ಕೆ ಇಂದು ಅಮಿತ್ ಶಾ ಭೇಟಿ| ವಿಧಾನಮಂಡಲ ಅಧಿವೇಶನ ಒಂದು ದಿನ ಮೊದಲೇ ಮುಕ್ತಾಯ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿದ್ದು, ಈ ನಡುವೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವು ರಾಜ್ಯದ ವಿವಿಧ ಭಾಗಗಳಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ಚರ್ಚೆಯಾಗುವ ಮುನ್ನವೇ ತರಾತುರಿಯಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Ad Widget . Ad Widget .

ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳುವಂತೆ ಸರ್ಕಾರದ ಮೇಲೆ ಒತ್ತಡವಿದ್ದರೂ ಅಧಿವೇಶನ ಇಂದು ಮೊಟಕುಗೊಳ್ಳಳಿದೆ ಎಂದು ಹೇಳಲಾಗುತ್ತಿದೆ. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಆದ್ಯತೆ ನೀಡುವ ನಿರೀಕ್ಷೆಗಳಿತ್ತು. ಆದರೆ, ಅಧಿವೇಶನದ ಕೊನೆಯ ದಿನದವರೆಗೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡುವ ಬಗ್ಗೆ ನಮೂದಾಗಿರಲಿಲ್ಲ. ಆದರೆ, ಅಧಿವೇಶನವನ್ನು 1 ದಿನ ಮೊದಲೇ ಮುಂದೂಡುವ ಘೋಷಣೆ ಹೊರಬೀಳುತ್ತಿದ್ದಂತೆಯೇ ಸದಸ್ಯರ ಆಗ್ರಹದ ಮೇರೆಗೆ ಬುಧವಾರ ಸಂಜೆಯಿಂದ ಕೊನೆಯ ದಿನವಾದ ಗುರುವಾರ ರಾತ್ರಿಯವರೆಗೆ ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಸ್ಪೀಕರ್ ಸಮ್ಮತಿ ನೀಡಿದರು.

Ad Widget . Ad Widget .

ಇದಕ್ಕೂ ಮುನ್ನ ಕಲಾಪ ಮೊಟಕಿಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ, ಕಳೆದ ಅಧಿವೇಶನದಲ್ಲೂ ಕಲ್ಯಾಣ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿಲ್ಲ. ಇದೀಗ ಒಂದು ದಿನ ಮೊದಲೇ ಮೊಟಕುಗೊಳಿಸಿದರೆ ಈ ಭಾಗದ ಜನರ ಸಮಸ್ಯೆಗಳನ್ನು ಎಲ್ಲಿ ಪ್ರಸ್ತಾಪಿಸಬೇಕು ಎಂದು ಪ್ರಶ್ನಿಸಿದರು. ಮೂಲಗಳ ಪ್ರಕಾರ, ಡಿಸೆಂಬರ್ 30 ರಂದು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದ್ದು, ಗುರುವಾರ ಮಧ್ಯಾಹ್ನದ ವೇಳೆಗೆ ಕೊನೆಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ. ಅಧಿವೇಶನದ ಕೊನೆಯ ದಿನವಾಗಿರುವ ಇಂದಿನ ಚರ್ಚೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಶಾಸಕರು ಹಾಜರಿರಲಿದ್ದಾರೆ.

ವೇಳಾಪಟ್ಟಿಯಂತೆ ಡಿಸೆಂಬರ್ 30 ರಂದು ಅಧಿವೇಶನ ಮುಕ್ತಾಯವಾಗಬೇಕಿತ್ತು. ಆದರೆ, ಗುರುವಾರ ಬೇಗನೇ ಅಧಿವೇಶನ ಮುಕ್ತಾಯವಾಗುವುದರಿಂದ ಪ್ರಶ್ನೋತ್ತರ ವೇಳೆಯಲ್ಲಿ ಮಹತ್ವದ ಹಣಕಾಸು ಮಸೂದೆಯನ್ನು ಮಂಡಿಸಲಾಗುವುದು ಎಂದು ಸ್ಪೀಕರ್ ಹೇಳಿದ್ದಾರೆ, ಹಳಿಯಾಳದಿಂದ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಆರ್ ವಿ ದೇಶಪಾಂಡೆ ಅವರು ಗುರುವಾರ ವಿಧಾನಸಭೆಯಲ್ಲಿ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಸ್ವೀಕರಿಸಿದ್ದು, ಬೆಳಗಾವಿಯಲ್ಲಿ ಅಧಿವೇಶನವನ್ನು ಪರಿಣಾಮಕಾರಿಯಾಗಿ ನಡೆಸುವಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ, “ಸರಕಾರವು ಸುವರ್ಣ ವಿಧಾನ ಸೌಧ ಸ್ಥಾಪನೆಗೆ ಭಾರಿ ಬಂಡವಾಳ ಹೂಡಿದೆ. ಈ ಬೃಹತ್ ಕಟ್ಟಡಕ್ಕೆ ಸಾರ್ವಜನಿಕರ ಹಣ ಖರ್ಚು ಮಾಡಲಾಗಿದೆ. ಆದರೆ, ದುರದೃಷ್ಟವಶಾತ್ ಅದು ಸರಿಯಾಗಿ ಬಳಕೆಯಾಗುತ್ತಿಲ್ಲ,” ಎಂದರು. ಸುವರ್ಣ ವಿಧಾನಸೌಧದಲ್ಲಿ ಕನಿಷ್ಠ 22 ದಿನಗಳ ಕಾಲ ಅಧಿವೇಶನ ನಡೆಯಬೇಕಿತ್ತು, ಹೀಗಾಗಿ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಬಹುದು ಎಂಬ ನಿರೀಕ್ಷೆಗಳಿದ್ದವು. “ಸರ್ಕಾರವು ಕೆಲವು ಉದ್ದೇಶಗಳೊಂದಿಗೆ ಅಧಿವೇಶನಗಳನ್ನು ನಡೆಸಬೇಕು ಮತ್ತು ಜನರ ಸಮಸ್ಯೆಗಳನ್ನು ಚರ್ಚಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *